Wednesday, May 26, 2010

ನಾನೊಂದು ಮುತ್ತಲ್ಲ ಬರಿ ಹೊಳೆವ ಕಲ್ಲು !


ನಾನೊಂದು ಮುತ್ತಲ್ಲ  ಬರಿ ಹೊಳೆವ ಕಲ್ಲು !

ಸಾವಿರ ಸಾವಿರ ಮುತ್ತು ಸಿಗುವುದು ಸಾಗರದಾಳದಲ್ಲಿ
ನನ್ನೇ ಏಕೆ ಆರಿಸಿದೆ ಮೋಹದ ಆತುರದಲ್ಲಿ ?

ಹೊಸ ಮುತ್ತ ಹುಡುಕಿನ್ನು ಹಳೆ ಕಲ್ಲ ಕಳೆದು
ಆಗದೀ ಸಾಗರವು ಎಂದಿಗೂ ಬರಿದು

ಹುಡುಕಾಡಿ ದಣಿದರೇ ಬಾ ಎನ್ನ ಕಡೆಗೆ
ಕಲ್ಲಾಗಿ ಇರಲಾರೆ ನಾ ಕೊನೆಯವರೆಗೆ

Ishwara Bhat K
Date : 20-05-2010, Thursday

4 comments:

  1. ಹುಡುಕಾಡಿ ದಣಿದರೇ ಬಾ ಎನ್ನ ಕಡೆಗೆ
    ಕಲ್ಲಾಗಿ ಇರಲಾರೆ ನಾ ಕೊನೆಯವರೆಗೆ...
    ಕಿರಣ, ಅದ್ಭುತವಾದ ಸಾಲುಗಳು..
    ಮನಸ್ಸಿಗೆ ಹಿತವೆನಿಸುವ ಕವನ ಬರೆದದ್ದಕ್ಕೆ ಅಭಿನಂದನೆಗಳು..ಹೀಗೇ ಮುಂದುವರಿಯಲಿ
    ನಿನ್ನ ಕವನದೆಡೆಗೆ ಪಯಣ...

    ReplyDelete